HomeKarnatakaಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೆದ್ದಾರಿಯ ಉಡಿಗಾಲ ಸಮೀಪ ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದ ಗಣೇಶ್ ಅವರು ತಮ್ಮ ಕಾರ್ ನಲ್ಲಿ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ ಮುಂಭಾಗ ಇಂಜಿನ್ ನಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಾರ್ ಗೆ ವ್ಯಾಪಿಸಿ ಹೊತ್ತಿ ಉರಿದಿದೆ. ಈ ವೇಳೆ ಕಾರ್ ನಿಂದ ಇಳಿದ ಗಣೇಶ್ ಅಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ಪಡೆದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗಲೇ ಕಾರ್  ಸಂಪೂರ್ಣ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular