HomeKarnatakaBREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ.

ಕಾರ್ ನಲ್ಲಿದ್ದ ಅತ್ತೆ, ಸೊಸೆ ಸಾವು ಕಂಡಿದ್ದು, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಗಂಗಾ ಗ್ರಾಮದ ರತ್ನಮ್ಮ(55), ಅವರ ಸೊಸೆ ಅನಿತಾ(30) ಮೃತಪಟ್ಟವರು ಎಂದು ಹೇಳಲಾಗಿದೆ.

ಇವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ನಿವಾಸಿಗಳು. ಅಪಘಾತದಲ್ಲಿ ಮಂಜುನಾಥ್ ಮತ್ತು ಮಂಜಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಹೊಸದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular