HomeKarnatakaBREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

BREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ಥಳದಲ್ಲೇ ಮಗು ಹಾಗೂ ಇಬ್ಬರು ಸಾವನ್ನಪ್ಪಿದ್ದರು. ಐವರು ಗಾಯಗೊಂಡಿದ್ದರು. ಆದರೆ ಓರ್ವ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರೆಲ್ಲರೂ ಬೆಂಗಳೂರಿನ ತಣಿಸಂದ್ರ ಮೂಲದವರು ಎಂದು ತಿಳಿದುಬಂದಿದೆ. 2 ವರ್ಷದ ನೋಹನ್, ಪ್ರಜ್ವಲ್ ರೆಡ್ಡಿ (30) ಹರ್ಷಿತಾ (28) ಹಾಗೂ ವಿಜಯ ರೆಡ್ಡಿ ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular