HomeIndiaBIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ.

ಬಿಕಾನೇರ್ ನ ಮಹಾಜನ್ ಜೈತ್ ಪುರ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರು ಹನುಮಾನ್ ಗಢದ ದಬ್ವಾಲಿ ನಿವಾಸಿಗಳು ಎಂದು ತಿಳಿದುಬದಿದೆ.

ಮೃತರನ್ನು ಆರತಿ, ದುಬ್ಬು, ಭೂಮಿಕಾ, ನೀರಜ್ ಕುಮಾರ್ ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಇಬ್ಬರು ಕಾರಿನಿಂದ ಹೊರಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಗೆ ಸೇರಿಸುವ ವೇಳೆ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಮಹಾಜನ್ ಪೊಲೀಸರು, ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular