HomeKarnatakaBIG NEWS: ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು...

BIG NEWS: ಕಾರು-ಲಾರಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ; ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ಅನಾಥ

ಗದಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಗೈ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿಯಲ್ಲಿ ನಡೆದಿದೆ.

ಸಿದ್ದರಾಮಯ್ಯ ಹಾಗೂ ಹೇಮಾಮೃತ ದಂಪತಿ. ಬಾಗಲಕೋಟೆ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಶಾನಕ್ಕೆ ತೆರಳು ಪೂಜೆ ಮುಗಿಸಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಈ ಅಪಘಾತಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಮಕ್ಕಳನ್ನು ಮಲ್ಲಿಕಾರ್ಜುನ, ಸಹನಾ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ-ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular