HomeLatest NewsBIG NEWS: ಕಾರು-ಲಾರಿ ಭೀಕರ ಅಪಘಾತ: ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು

BIG NEWS: ಕಾರು-ಲಾರಿ ಭೀಕರ ಅಪಘಾತ: ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು

ಕಾಸರಗೋಡು: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಕೇರಳ ಬಳಿಯ ಚೆಂಗಳ ನಾಲ್ಕನೇ ಮೈಲ್ ಬಳಿ ನಡೆದಿದೆ.

ಸಜಿತ್ (38) ಮೃತ ದುರ್ದೈವಿ. ಚೇರ್ವತ್ತೂರು ಮಾಯಿಚ್ಚಿ ನಿವಾಸಿ ಎಂದು ತಿಳಿದುಬಂದಿದೆ. ಕಾನ್ಸ್ ಟೇಬಲ್ ಸಜಿತ್ ಪ್ರಯಾಣಿಸುತ್ತಿದ್ದ ಆಲ್ಟೋ ಕಾರು ಹಾಗೂ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ ಗಂಭೀರವಾಗಿ ಗಾಯಗೊಂಡಿದ್ದ ಸಜಿತ್ ಅವರನ್ನು ಚೆಂಗಳದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರ ಜೊತೆಗಿದ್ದ ಸಿವಿಲ್ ಪೊಲೀಸ್ ಅಧಿಕಾರಿ ಸುಭಾಶ್ಚಂದ್ರನ್ ಕೂಡ ಗಾಯಗೊಂಡಿದ್ದಾರೆ.

ಮಾದಕ ದ್ರವ್ಯ ಮಾರಾಟದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಅದರ ಜಾಡು ಹಿಡಿದು ಪೊಲೀಸ್ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ತನಿಖೆಗೆ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular