ಚಾಮರಾಜನಗರ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐವರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಮಾಹಿತಿ ನಿಡಿದ್ದು, ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳಾಗಿದ್ದಾರೆ. ನಲವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಓರ್ವ ಡಿಪ್ಲೋಮಾ ವಿದ್ಯಾರ್ಥಿ. ಎಲ್ಲರೂ ಮೈಸೂರಿನ ಎಂಐಟಿ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿಸಿದ್ದಾರೆ.
ಶಿವರಾತ್ರಿ ಜಾತ್ರೆಗೆಂದು ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಶ್ರೀಲಕ್ಷ್ಮೀ ಕೊಳ್ಳೆಗಾಲದ ಕೆಂಪನಪಾಳ್ಯ ನಿವಾಸಿ. ಪೋಷಕರು ಮಗಳ ಶಿಕ್ಷಣಕ್ಕಾಗಿ ಮೈಸೂರಿನಲ್ಲಿ ಮನೆ ಮಾಡಿಕೊಂಡಿದ್ದರು. ಶ್ರೀಲಕ್ಷ್ಮೀ ಸ್ನೇಹಿತರ ಜೊತೆ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.