HomeIndiaಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಹೊತ್ತಿಕೊಂಡ ಬೆಂಕಿ: ನಾಲ್ವರು ಸಜೀವದಹನ

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಹೊತ್ತಿಕೊಂಡ ಬೆಂಕಿ: ನಾಲ್ವರು ಸಜೀವದಹನ

ಭೋಪಾಲ್: ಚಲಿಸುತ್ತಿದ್ದ ಕಾರ್ ನ ಟೈರ್ ಬ್ಲಾಸ್ಟ್ ಆಗಿ ಸೇತುವೆಯ ತಡೆಗೋಡೆಗೆ ದಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವದಹನವಾಗಿರುವ ಘಟನೆ ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿ ನಡೆದಿದೆ.

ಶೃಂಗಾರ ಕ್ಷೇತ್ರವಾದ ಸಾವರಿಯಾ ಸೇಥ್ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ಮರಳುತ್ತಿದ್ದ ಆಪ್ತ ಸ್ನೇಹಿತರಿದ್ದ ಕಾರು, ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಕಾರಿನೊಳಗೆ ಸಿಲುಕಿಕೊಂಡ ನಾಲ್ವರು ಯುವಕರು ಸಜೀವ ದಹನಗೊಂಡಿದ್ದಾರೆ. ಕಾರಿನಿಂದ ಹೊರಗೆ ಬಿದ್ದ ಮತ್ತೊಬ್ಬ ಯುವಕ ತೀವ್ರ ಗಾಯಗಳೊಂದಿಗೆ ಬದುಕುಳಿದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರ ಜಿಲ್ಲೆಯ ಸಾದಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಲೇಬಡ್-ನಾಯಗಾಂವ್ ಹಾಗೂ ಮೌ-ನೀಮಚ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಹೀರಾ ಧಾಬಾ ಹಾಗೂ ಸಂಗೇಶರ ಸಮೀಪದ ಸೇತುವೆ ಬಳಿ ಭಾನುವಾರ ತಡರಾತ್ರಿ ಸುಮಾರು 11:14 ರಿಂದ 11:30ರ ವೇಳೆಗೆ ಈ ದುರಂತ ನಡೆದಿದೆ.

ಸಾಂಗೋರ್ ಗ್ರಾಮದ ಐವರು ಯುವಕರು ದೇವಸ್ಥಾನದ ದರ್ಶನ ಮುಗಿಸಿ ತಮ್ಮ ಸ್ವಿಫ್ಟ್ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಸೇತುವೆ ದಾಟುವ ವೇಳೆ ಕಾರಿನ ಚಾಲಕನ ಬದಿಯ ಮುಂಭಾಗದ ಟೈರ್ ದಿಢೀರನೆ ಸ್ಫೋಟಗೊಂಡಿದೆ . ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ಕಾಲುವೆ/ಸೇತುವೆಯ ತಗ್ಗಿಗೆ ಬಿದ್ದು, ಕ್ಷಣಾರ್ಧದಲ್ಲೇ ತೀವ್ರವಾಗಿ ಬೆಂಕಿ ಹೊತ್ತಿಕೊಂಡಿದೆ.

ಅಪಘಾತ ಸಂಭವಿಸಿದ ವೇಳೆ ಕಾರಿನಲ್ಲಿದ್ದ ಬಹುತೇಕ ಯುವಕರು ನಿದ್ರೆಯಲ್ಲಿದ್ದರೆನ್ನಲಾಗಿದೆ. ಸೇತುವೆಗೆ ಡಿಕ್ಕಿ ಹೊಡೆದು ತಗ್ಗಿಗೆ ಬಿದ್ದಾಗ ಶಬ್ದದೊಂದಿಗೆ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದರಿಂದ ಯುವಕರಿಗೆ ಹೊರಬರಲು ಸಾಧ್ಯವಾಗದೆ ಒಳಗೆಯೇ ಸಜೀವ ದಹನಗೊಂಡಿದ್ದಾರೆ.

ಇನ್ನು ಮೃತಪಟ್ಟವರನ್ನು ಭೀಮ್ ಢಾಕಡ್(24 ವರ್ಷ), ಆದಿತ್ಯ ತಿವಾರಿ (22 ವರ್ಷ), ಚೇತನ್ ಢಾಕಡ್ ( 21 ವರ್ಷ), ಅಭಿಷೇಕ್ ಸೋಲಂಕಿ (19 ವರ್ಷ) ಎಂದು ಗುರುತಿಸಲಾಗಿದೆ. ಇನ್ನು ಮೃತಪಟ್ಟ ನಾಲ್ವರೂ ಸಾಂಗೋರ್ ನಿವಾಸಿಗಳಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತುಷಾರ್ ಮುಖೇಶ್ ಮಂಡ್ಲೋಯಿ (20 ವರ್ಷ) ಎಂಬ ಯುವಕ ಅಪಘಾತದ ರಭಸಕ್ಕೆ ಕಾರಿನಿಂದ ಹೊರಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೇ. 35 ರಿಂದ 40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಆತನನ್ನು ಧಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ, ಕಾರು ಸಂಪೂರ್ಣವಾಗಿ ಭಸ್ಮಗೊಂಡಿತ್ತು. ಕಾರಿನೊಳಗೆ ನಾಲ್ವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಧಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪಾರುಲ್ ಬೇಲಾಪುರ್ಕರ್ ಹಾಗೂ ಎಸ್‌ಪಿ ಸಚಿನ್ ಶರ್ಮಾ ಅವರ ನಿರ್ದೇಶನದಂತೆ ಸಾದಲ್‌ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

ಇಂಟರ್ವ್ಯೂ ಗೆ ತೆರಳುತ್ತಿದ್ದಾಗ ಭೀರ ಕಾರು ಅಪಘಾತ: ಇಬ್ಬರು ಯುವತಿಯರು ಸ್ಥಳದಲ್ಲೇ ದುರ್ಮರಣ

ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮ್ರ‍ಿಉತಪಟ್ಟಿದ್ದಾರೆ. ಎರಡೂ ಕಾರುಗಳಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿ.ಫಾರ್ಮ್ ಮುಗಿಸಿದ್ದ ಮೂವರು ಯುವತಿಯರು ಜಾಬ್ ಇಂಟರ್ವ್ಯೂ ಗೆಂದು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಗುದ್ದಿ ಪಲ್ಟಿಯಾಗಿದ್ದು, ಈ ದುರಂತಕ್ಕೆ ಕಾರಣವಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವ ಯುವತಿ ಹಾಗೂ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಿ ಫಾರ್ಮ್ ಮುಗಿಸಿ ಕೆಲಸ ಹುಡುಕುತ್ತಿದ್ದ ಮೂವರು ಯುವತಿಯರು ಬೆಂಗಳೂರಿನಲ್ಲಿ ಜಾಬ್ ಇಂಟರ್ವ್ಯೂ ಇದೆ ಎಂದು ತುಮಕೂರಿನಿಂದ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಒಳ್ಳೆಯ ಕೆಲಸದ ಕನಸು ಕಾಣುತ್ತ ಬದುಕನ್ನು ರೂಪಿಸಿಕೊಳ್ಳುವ ತವಕದಲ್ಲಿದ್ದ ಯುವತಿಯರು, ಮಾರ್ಗ ಮಧ್ಯೆಯೇ ಅಪಘಾತಕ್ಕೆ ಬಲಿಯಾಗಿರುವುದು ನಿಜಕ್ಕೂ ದುರಂತವೇ ಸರಿ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular