HomeKarnatakaBREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

BREAKING NEWS: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬುತುಂಬಿದ ಟ್ರ್ಯಾಕ್ಟರ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ, ಕಾರಿನಲ್ಲಿದ್ದ ಯುವಕ ಸಾವನ್ನಪ್ಪಿರುವ ಘೋರ ಘಟನೆ ಬೆಳಗಾವಿಯ ಸುವರ್ಣಸೌಧದ ಬಳಿ ನಡೆದಿದೆ.

ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಮೂವರು ಯುವಕರು ಬರ್ತ್ ಡೇ ಪಾರ್ಟಿ ಮುಗಿಸಿ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಬ್ಬುತುಂಬಿದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಮೂಲದ 24 ವರ್ಷದ ಗಿರೀಶ್ ಕುಲಕರ್ಣಿ ಮೃತ ಯುವಕ. ಪ್ರಥಮ್ ಹಾಗೂ ಇನ್ನೋರ್ವ ಗಿರೀಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular