ಮಂಗಳೂರು: ವರುಣಾರ್ಭಟಕ್ಕೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಮುರಿದು ಬಿದ್ದಿದ್ದು, ಕಾರಿನಲ್ಲಿ ಸಿಲುಕಿಕೊಂಡಿರುವ ಕುಟುಂಬ ಹೊರಬರಲಾಗದೇ ಪರದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.
ಮರಬಿದ್ದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನ ಒಳಗಡೆ ಕುಟುಂಬವೊಂದು ಸಿಲುಕಿಕೊಂಡಿದೆ. ಸ್ಥಳೀಯರು, ಇತರ ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಿಸಲು ಹರಸಾಹಸಪಟ್ಟಿದ್ದಾರೆ.
ಕಾರಿನಲ್ಲಿದ್ದ ಚಾಲಕ, ಮಹಿಳೆ, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬವೊಂದು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.