HomeLatest NewsBIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು...

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಮುಂಬೈ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಪುಣೆಯ ಸಿಂಬಿಯೋಸಿಸ್ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದ ನಾಲ್ವರು ಬಿಬಿಎ ವಿದ್ಯಾರ್ಥಿಗಳು ಲೋನಾವಾಲಾಕ್ಕೆ ತೆರಳಿದ್ದರು. ವಾಪಸ್ ಆಗುವಾಗ ಕಾರು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ದಿವ್ಯಾ ರಾಜ್ ಸಿಂಗ್ ರಾಥೋಡ್ (20) ಹಾಗೂ ಸಿದ್ದಾಂತ್ ಆನಂದ್ ಶೇಖರ್ (20) ಮೃತ ವಿದ್ಯಾರ್ಥಿಗಳು. ಹರ್ಷಾ ಮಿಶ್ರಾ ಹಾಗೂ ನಿಹಾರ್ ತಂಬೋಲಿ ಎಂಬ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಈದ್ಗಾ ಮೈದಾನದ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಹೊಡೆದು ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular