ವಿಜಯಪುರ: ಶ್ರೀಶೈಲಕ್ಕೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ-ತಾಳಿಕೋಟೆ ಹೆದ್ದಾರಿಯಲ್ಲಿ ನಡೆದಿದೆ.
ಇಲ್ಲಿನ ಬಸವನಹಟ್ಟಿಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರಪ್ಪಟಕ್ಕನ್ನವರ್ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ.
ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

