HomeLatest NewsBREAKING: ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

BREAKING: ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

ಬೆಂಗಳೂರು: ವ್ಯಕ್ತಿಯೋರ್ವ ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿ ಎರಡು ಬೈಕ್ ಗಳಿಗೆ ಗುದ್ದಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.

ಮೈಸೂರು ರಸ್ತೆಯ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್ ಬಳಿ ಅತಿ ವೇಗ ಮತ್ತು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆಯಲ್ಲಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಸುಖದೇವ್ ಎಂಬಾತ ಕಾರಿನಿಂದ ಹೊರಗೆ ಬಿದ್ದಿದ್ದು, ಅದೇ ಕಾರು ಆತನ ಮೇಲೆಯೇ ಉರುಳಿ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಅಪಘಾತದಲ್ಲಿ ಎರಡು ಬೈಕ್‌ಗಳಲ್ಲಿದ್ದ ಮೂವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular