ನವದೆಹಲಿ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಜೆವರ್ ನಿಂದ ನೊಯ್ಡಾಗೆ ಹೋಗುತ್ತಿದ್ದ ವೇಳೆ ಎರಡು ಕಾರಿಗಳ ನಡುವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಹೊರಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

