HomeKarnatakaBIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

BIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು:  ಚಾಲಕನ ನಿಯಂತ್ರಣತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಚಾಲಕ ಸಚಿನ್ ಮೃತ ದುರ್ದೈವಿ. ಕಾರಿನಲ್ಲಿದ್ದ ಇನ್ನೋರ್ವ ಬಲವಂತ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಇಬ್ಬರೂ ಕೆಲಸ ಮಾಡುತ್ತಿದ್ದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular