HomeKarnatakaBIG NEWS: ಶಾಸಕ ಶಿವಲಿಂಗೇಗೌಡರ ಆಪ್ತನ ಕಾರು-ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಶಾಸಕ ಶಿವಲಿಂಗೇಗೌಡರ ಆಪ್ತನ ಕಾರು-ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.

ಕಾರು, ಶಾಸಕ ಶಿವಲಿಂಗೇಗೌಡರ ಆಪ್ತ ಬಾಣಾವರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಿಳಿ ಚೌಡಯ್ಯ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಕಾರಿನೊಳಗೆ ಸಿಲುಕಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಬಳಿಕ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular