ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ(CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆದಿದ್ದು ಅದಕ್ಕೆ ಸಂಬಂಧಿಸಿದಂತೆ ಸೆ.7ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ ಸಲ್ಲಿಸಬಹುದು. ಇದಕ್ಕೆ ಸೆ.9ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ.
ಪೂರ್ಣ ಮಾಹಿತಿಯೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ ₹25 ಪಾವತಿಸಬೇಕು. ವಿಷಯ ತಜ್ಞರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ ಪ್ರಕಟಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಒಎಂಆರ್ ಶೀಟ್ ನೋಡಲು ಅವಕಾಶ
ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ(CAR/ DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಭಾನುವಾರ ಅತ್ಯಂತ ಯಶಸ್ವಿಯಾಗಿ ಲಿಖಿತ ಪರೀಕ್ಷೆ ನಡೆಸಿತು.
ಮಿಕ್ಕುಳಿದ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ 1,42,220 ಮಂದಿ ಪೈಕಿ 1,14,079( ಶೇ 80) ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕದ ಒಟ್ಟು 32,191 ಅಭ್ಯರ್ಥಿಗಳ ಪೈಕಿ 28,849(ಶೇ 90) ಮಂದಿ ಹಾಜರಾಗಿದ್ದರು.
ಬೆಳಗಿನ ಅವಧಿಯ 309 ಹಾಗೂ ಮಧ್ಯಾಹ್ನದ 60 ಕೇಂದ್ರಗಳಲ್ಲಿ ಯಾವುದೇ ಗೊಂದಲ ಇಲ್ಲದೆ ಪರೀಕ್ಷೆ ನಡೆಯಿತು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು.
ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ನಿಂದಲೇ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡುವ ವ್ಯವಸ್ಥೆ ಮಾಡಲಾಗಿತ್ತು.
ಪರೀಕ್ಷೆ ಮುಗಿದ ನಂತರ ಕೆಇಎ ತಲುಪಿದ OMR ಉತ್ತರ ಪತ್ರಿಕೆಗಳನ್ನು ತಕ್ಷಣವೇ ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕೆಲಸ ಕೂಡ ಮಾಡಲಾಗುತ್ತಿದೆ. ಇದೊಂದು ಪಾರದರ್ಶಕ ಕ್ರಮವಾಗಿದ್ದು, ಯಾರು ಬೇಕಾದರೂ OMR ಪ್ರತಿಗಳನ್ನು ನೋಡಬಹುದು.
ಅರಿವು ನವೀಕರಣ ಸಾಲ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಕರ್ನಾಟಕ ಅಲ್ಪಸಂಖ್ಯಾತರ ಆಭಿವೃದ್ದಿ ನಿಗಮವು 2026-27 ನೇ ಸಾಲಿಗೆ ಅರಿವು ನವೀಕರಣ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಕೆಇಎ/ ಸಿಇಟಿ/ ನೀಟ್/ ಮೂಲಕ ಪದವಿ ಮತ್ತು ಎಂಬಿಬಿಎಸ್, ಬಿಡಿಎಸ್, ಬಿ-ಆಯುಷ್, , ಬಿಇ/ ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಅರ್ಗಿಕಲ್ಚರ್ ಸೈನ್ಸ್, ವೆಟರ್ನರಿ ಅಂಡ್ ಫಾರ್ಮ ಸೈನ್ಸ್ ಇಂತಹ ಕೋರ್ಸ್ಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ.12 ರಷ್ಟು ಹಣವನ್ನು ಪಾವತಿಸಿ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು (ಕ್ರಿಶ್ಚಿಯನ್ ಸಮುದಾಯದ ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದ್ದು, ಇಂತಹ ವಿದ್ಯಾರ್ಥಿಗಳಿಗೆ ರಿನ್ಯೂವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ.
ಅರ್ಜಿಯನ್ನು https://kmdconline.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸೆ.30 ರೊಳಗಾಗಿ ಸಲ್ಲಿಸುವುದು. ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಮೂಲ ಇಂಡೆನ್ನಿಟಿ ಬಾಂಡ್ ಮತ್ತು ಸಾಲಕ್ಕೆ ಸಂಬಂಧಿಸಿದ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಅಚ್ಚುತರಾವ್ ಲೇಔಟ್ 4 ನೇ ತಿರುವು ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇವರಿಗೆ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-228262 ಗೆ ಸಂಪರ್ಕಿಸುವಂತೆ. ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#KEA Recruitment:
ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (#CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆದಿದ್ದು ಅದಕ್ಕೆ ಸಂಬಂಧಿಸಿದಂತೆ ಸೆ.7ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ… pic.twitter.com/E1sR6koeXU
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) September 7, 2026

