HomeLatest NewsBIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ದೇವನಹಳ್ಳಿ: ಚಲಿಸುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಇದ್ದಕ್ಕಿದ್ದಂತೆ ಬೆಂಕಿಯಲ್ಲಿ ಹಿಒತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದಲ್ಲಿ ನಡೆದುದೆ.

ಹೊಸಕೋಟೆ-ದಾಬಸ್‌ಪೇಟೆ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಮಾರ್ಗ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ.

ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular