ಚೆನ್ನೈ: ಲ್ಯಾಂಡಿಂಗ್ ವೇಳೆ ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತಮಿಳುನಾಡಿನ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಕೌಲಾಲಂಪುರದಿಂದ ಚೆನ್ನೈಗೆ ಬರುತ್ತಿದ್ದ ಕಾರ್ಗೋ ವಿಮಾನ ಲ್ಯಾಂಡಿಂಗ್ ವೇಳೆ ಎಂಜಿನ್ ನಲ್ಲಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.
ವಿಮಾನದಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರ ತರಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ವಿಮಾನಯಾನ ಸುರಕ್ಷತಾ ದೃಷ್ಟಿಯಿಂದ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.