HomeLatest NewsBIG NEWS: ಲ್ಯಾಂಡಿಂಗ್ ವೇಳೆ ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಅವಘಡ: ಸ್ವಲ್ಪದರಲ್ಲಿ ತಪ್ಪಿದ...

BIG NEWS: ಲ್ಯಾಂಡಿಂಗ್ ವೇಳೆ ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಅವಘಡ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ

ಚೆನ್ನೈ: ಲ್ಯಾಂಡಿಂಗ್ ವೇಳೆ ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತಮಿಳುನಾಡಿನ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಕೌಲಾಲಂಪುರದಿಂದ ಚೆನ್ನೈಗೆ ಬರುತ್ತಿದ್ದ ಕಾರ್ಗೋ ವಿಮಾನ ಲ್ಯಾಂಡಿಂಗ್ ವೇಳೆ ಎಂಜಿನ್ ನಲ್ಲಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ.

ವಿಮಾನದಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರ ತರಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ವಿಮಾನಯಾನ ಸುರಕ್ಷತಾ ದೃಷ್ಟಿಯಿಂದ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular