ಕನ್ನಡಿಗರ ಪಾಲಿಗೆ ಹೆಮ್ಮಾರಿ, ಪಕ್ಕದೂರಿಗೆ ಉಪಕಾರಿ : ರಾಜ್ಯ ಸರ್ಕಾರದ ವಿರುದ್ಧ R. ಅಶೋಕ್ ವಾಗ್ಧಾಳಿ

ಬೆಂಗಳೂರು : ಗ್ಯಾರೆಂಟಿಗಳನ್ನು ಜಾರಿ ಮಾಡಲಾಗದೆ ದಿನಕ್ಕೊಂದು ಕುಂಟು ನೆಪ, ನೂರೆಂಟು ಕಂಡೀಷನ್ ಹಾಕಿ ಕನ್ನಡಿಗರಿಗೆ ಮೋಸ ಮಾಡಿರುವ ಕಾಂಗ್ರೆಸ್ ಪಕ್ಷ, ಎಲ್ಲಾ 5 ಗ್ಯಾರೆಂಟಿಗಳನ್ನೂ ಚಾಚೂ ತಪ್ಪದೆ ಜಾರಿ ಮಾಡಿಬಿಟ್ಟಿದ್ದೇವೆ ಎಂದು ಸತ್ಯದ ತಲೆಯ ಮೇಲೆ ಹೊಡೆದಂತೆ ಸುಳ್ಳು ಜಾಹೀರಾತು ನೀಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಟ್ವೀಟ್ ಮೂಲಕ ಕಿಡಿಕಾರಿದ ವಿಪಕ್ಷ ನಾಯಕ ಆರ್ ಅಶೋಕ್ ಒಂದು ಕಡೆ ರಾಜ್ಯದ ಅಭಿವೃದ್ಧಿಗೆ ಹಣವಿಲ್ಲದೆ ಜನರ ಮುಂದೆ ಮೊಸಳೆ ಕಣ್ಣೀರು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ, ಮತ್ತೊಂದೆಡೆ ತೆಲಂಗಾಣ ರಾಜ್ಯದ ದಿನಪತ್ರಿಕೆಗಳಲ್ಲಿ ಜಾಹೀರಾತು ಕೊಡಲು ರಾಜ್ಯದ ಬೊಕ್ಕಸ ದುರ್ಬಳಕೆ ಮಾಡಿಕೊಂಡು ಚುನಾವಣಾ ಆಯೋಗದಿಂದ ಛೀಮಾರಿ ಹಾಕಿಸಿಕೊಂಡಿದೆ.

ರಾಜ್ಯದ ಬೊಕ್ಕಸ ಬರಿದು ಮಾಡಿ ಕನ್ನಡಿಗರ ಪಾಲಿಗೆ ಹೆಮ್ಮಾರಿಯಾಗಿರುವ ಕಾಂಗ್ರೆಸ್ ಸರ್ಕಾರ ಪಕ್ಕದೂರಿಗೆ ಉಪಕಾರಿಯಾಗುವ ಫೋಸ್ ಕೊಡಲು ಹೊರಟಿರುವುದು ಕರ್ನಾಟಕದ ದುರಂತವೇ ಸರಿ ಎಂದು ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

https://twitter.com/RAshokaBJP/status/1729399416711487641

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read