HomeIndiaBIG NEWS: ಕಾರಿನ ಮೇಲೆ ಮಗುಚಿ ಬಿದ್ದ ಲಾರಿ: ಟೆಕ್ಕಿ ದುರ್ಮರಣ

BIG NEWS: ಕಾರಿನ ಮೇಲೆ ಮಗುಚಿ ಬಿದ್ದ ಲಾರಿ: ಟೆಕ್ಕಿ ದುರ್ಮರಣ

ಚಿತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಟೆಕ್ಕಿಯೋರ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಲಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ. ಚಿತ್ತೂರು-ಬೆಂಗಳೂರು ಹೈವೇಯಲ್ಲಿ ಈ ಘಟನೆ ನಡೆದಿದೆ.

ಗುಡಿಪಾಲ ಮಂಡಲದ ರಾಮಪುರಂ ಗ್ರಾಮದ ನಿವಾಸಿ ಡಿ ಅನುದೀಪಕ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular