HomeLive Newsಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ನಿವೃತ್ತ ಉಪನ್ಯಾಸಕ ಸ್ಥಳದಲ್ಲೆ ದುರ್ಮರಣ

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ನಿವೃತ್ತ ಉಪನ್ಯಾಸಕ ಸ್ಥಳದಲ್ಲೆ ದುರ್ಮರಣ

ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular