HomeKarnatakaಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಕಂಬಳೋತ್ಸವ : ಸಾರ್ವಜನಿಕರಿಗೆ ಪ್ರವೇಶ ಉಚಿತ |Bengaluru Kambala

ಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಕಂಬಳೋತ್ಸವ : ಸಾರ್ವಜನಿಕರಿಗೆ ಪ್ರವೇಶ ಉಚಿತ |Bengaluru Kambala

ಬೆಂಗಳೂರು : ನೂರಾರು ವರ್ಷಗಳ ಇತಿಹಾಸವಿರುವ ಕಂಬಳ ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಇಂದಿನಿಂದ 2 ದಿನ ಕಂಬಳ ಸ್ಪರ್ಧೆ ನಡೆಯಲಿದ್ದು, ಎರಡು ಲಕ್ಷಕ್ಕೂ ಹೆಚ್ಚು ಜನರು ಜನಪ್ರಿಯ ಆಟಕ್ಕೆ ಸಾಕ್ಷಿಯಾಗಲಿದ್ದಾರೆ .

ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳವನ್ನು ಸಾರ್ವಜನಿಕರು ಉಚಿತವಾಗಿ ವೀಕ್ಷಿಸಬಹುದು. ಕಂಬಳ ನೋಡಲು ಯಾವುದೇ ಟಿಕೆಟ್ ಇಲ್ಲ. ಹಾಗೆಯೇ ಅರಮನೆ ಮೈದಾನದಲ್ಲಿ ಕೋಣಗಳ ಓಟ ಮಾತ್ರವಲ್ಲ ಕರಾವಳಿಯ ವಿವಿಧ ಬಗೆಯ ಖಾದ್ಯಗಳನ್ನೂ ಸವಿಯಬಹುದು.

ನವೆಂಬರ್ 25 ಮತ್ತು 26 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಿಂದಾಗಿ ನಗರದ ಕೆಲವು ಭಾಗಗಳಲ್ಲಿ ಸಂಚಾರದ ಮೇಲೆ ಪರಿಣಾಮ ಬೀರಬಹುದು.ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಕೆಲವು ರಸ್ತೆಗಳನ್ನು ತಪ್ಪಿಸಲು ಮತ್ತು ಪರ್ಯಾಯ ಮಾರ್ಗಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular