HomeKarnatakaಪ್ರಜ್ವಲ್ ರೇವಣ್ಣ ವಿರುದ್ಧದ ಕೇಸ್: ಪೆನ್ ಡ್ರೈವ್ ಮೂಲಕ ಅಶ್ಲೀಲ ವಿಡಿಯೋ ಹಂಚಿದವರಿಗೂ ಸಂಕಷ್ಟ

ಪ್ರಜ್ವಲ್ ರೇವಣ್ಣ ವಿರುದ್ಧದ ಕೇಸ್: ಪೆನ್ ಡ್ರೈವ್ ಮೂಲಕ ಅಶ್ಲೀಲ ವಿಡಿಯೋ ಹಂಚಿದವರಿಗೂ ಸಂಕಷ್ಟ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ ಎದುರಾಗಿದೆ.

ಇತರೆ ಎಂಟು ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲು, 8 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು 42ನೇ ಎಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.

ಪೆನ್ ಡ್ರೈವ್ ಮೂಲಕ ಅಶ್ಲೀಲ ವಿಡಿಯೋ, ಫೋಟೋ ಹಂಚಿಕೆ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ನವೀನ್ ಗೌಡ, ಎ3 ಲಿಖಿತ್ ಹೆಚ್.ಪಿ., ಎ4 ನಿಶಾಂತ್,. ಎ5 ಕಿರಣ್, ಎ6 ಎಸ್.ಕೆ. ಶರತ್, ಎ7 ತೇಜಸ್, ಎ8 ಗಗನ್ ಕುಮಾರ್, ಎ9 ರೇವಂತ್ ಅವರಿಗೆ ಸಮನ್ಸ್ ಜಾರಿ ಮಾಡಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ಎ, ಐಪಿಸಿ ಸೆ.509ರಡಿ ಕೇಸ್​​​​​ನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೆ ನ್ಯಾಯಾಧೀಶ ಸಂದೀಪ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಏ.23ರಂದು ದೂರು ನೀಡಿದ್ದರು. ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆ ಏ.26ರಂದು ನಿಗದಿಯಾಗಿತ್ತು. ಆರೋಪಿಗಳಾದ ನವೀನ್‌ಗೌಡ ಹಾಗೂ ಇತರರು ಏ.21ರಂದು ಸಂಜೆ 6.30ರಿಂದ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಕಲಿ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ಒಳಗೊಂಡ ಸಿಡಿ ಹಾಗೂ ಪೆನ್​ಡ್ರೈವ್ ಸಿದ್ಧಪಡಿಸಿಕೊಂಡಿದ್ದಾರೆ. ಬಳಿಕ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರಿಗೆ ಹಂಚಿದ್ದಾರೆ. ವಾಟ್ಸ್​ಆ್ಯಪ್/ಮೊಬೈಲ್​ಗಳಲ್ಲಿ ತೋರಿಸಿ ಜನರಿಗೆ ದಿಕ್ಕು ತಪ್ಪಿಸಿ ಪ್ರಜ್ವಲ್ ರೇವಣ್ಣಗೆ ಮತ ಹಾಕದಂತೆ ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ನ್ಯಾಯಯುತ ಮತದಾನ ನಡೆಯುವುದನ್ನು ತಪ್ಪಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಈ ದೂರಿನ ಮೇರೆಗೆ ಅರ್ಜಿದಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 (ಜಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67(ಎ) ಅಡಿಯಲ್ಲಿ ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋ ಪ್ರಕಟಿಸಿದ ಮತ್ತು ರವಾನಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular