HomeKarnatakaನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಚುನಾವಣಾ ಅಧಿಕಾರಿ ರಘುನಂದನ ಮೂರ್ತಿ ಅವರು ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಸಿದ್ದಪ್ಪ ಕಲ್ಲಪ್ಪ ಪೂಜಾರಿ ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ ನಾಮಪತ್ರದೊಂದಿಗೆ ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ಪರಿಶೀಲನೆ ವೇಳೆ ಸೂಚಕರ ವಿವರ ಮತ್ತು ಅವರ ಸಹಿಯ ಬಗ್ಗೆ ಸಂಶಯ ಬಂದಿದ್ದು, ಸೂಚಕರ ಮನೆಗೆ ಹೋಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಲಾಗಿದೆ. ಇದು ನಮ್ಮ ಸಹಿ ಅಲ್ಲ ನಾವು ನಾಮಪತ್ರದ ನಮೂನೆಗೆ ಸಹಿ ಹಾಕಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular