HomeKarnataka15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ...

15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ 15 ಸಾವಿರ ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ ತಾಯಿ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ. ಆರ್ಥಿಕ ಸಂಕಷ್ಟದಿಂದ ಮಾರಾಟವೆಂದು ಮಹಿಳೆಯನ್ನು ಖುಲಾಸೆಗೊಳಿಸಿದೆ.

ಗಂಡನಿಂದ ದೂರವಾಗಿರುವ ದಿನಗೂಲಿ ಕಾರ್ಮಿಕ ಮಹಿಳೆಗೆ ಒಂದು ಗಂಡು, ಒಂದು ಹೆಣ್ಣು ಮಗುವಿತ್ತು. ಆರ್ಥಿಕ ಸಂಕಷ್ಟದ ಕಾರಣ ಮಕ್ಕಳಿಲ್ಲದ ಮಹಾರಾಷ್ಟ್ರ ದಂಪತಿಗೆ 15 ಸಾವಿರ ರೂ.ಗೆ ಮಾರಾಟ ಮಾಡಿದ್ದಾಳೆ. ಆದರೆ, ಕಾನೂನುಬದ್ಧವಾಗಿ ದತ್ತು ಪ್ರಕ್ರಿಯೆ ನಡೆದಿಲ್ಲವೆಂದು ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ದೂರಿನ ಮೇರೆಗೆ 2019 ರಲ್ಲಿ ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಕೋರಿ ತೆಂಗಿನಕೊಪ್ಪ ಮೂಲದ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ  ಏಕಸದಸ್ಯ ಪೀಠ ಪುರಸ್ಕರಿಸಿ ಪ್ರಕರಣವನ್ನು ರದ್ದು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ಥಿಕ ಸಂಕಷ್ಟದಿಂದ ತನ್ನ ಮಗುವನ್ನು ಮಹಿಳೆ ಮಾರಾಟ ಮಾಡಿದ್ದಾಳೆ. ಮಗು ಪಡೆದುಕೊಂಡ ದಂಪತಿ ಕಳ್ಳ ಸಾಗಾಣೆಗೆ ಬಳಸಿಲ್ಲ. ದಂಪತಿಯ ಉದ್ದೇಶ ದತ್ತು ಪಡೆದುಕೊಳ್ಳುವುದಷ್ಟೇ ಎಂಬುದು ತಿಳಿಯುತ್ತದೆ ಎಂದು ಹೈಕೋರ್ಟ್ ಹೇಳಿದೆ. ಶಿಶು ಪಡೆದುಕೊಂಡವರು ಕಾನೂನು ಬದ್ಧ ದತ್ತು ಪ್ರಕ್ರಿಯೆ ಪಡೆದಿಲ್ಲ ಎನ್ನುವುದು ಹೊರತಾಗಿ ಬೇರೆ ಸಮಸ್ಯೆ ಇಲ್ಲವೆಂದು ಮಹಿಳೆ ಪರ ವಕೀಲರು ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular