HomeLatest NewsBREAKING : ಬೆಂಗಳೂರಿನ 'ಡೇ ಕೇರ್' ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ ; ಇಬ್ಬರು...

BREAKING : ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ ; ಇಬ್ಬರು ಆರೋಪಿಗಳು ಅರೆಸ್ಟ್ |WATCH VIDEO

ಬೆಂಗಳೂರು : ಬೆಂಗಳೂರಿನ ಬ್ರೂಕ್‌ ಫೀಲ್ಡ್‌’ನಲ್ಲಿರುವ ಸೊಸೈಟಿ ಜನರಲ್ ಬೇಬಿ ಕೇರ್ (ಡೇ ಕೇರ್) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಅಮಾನವೀಯವಾಗಿ ಹಿಂಸೆ ನೀಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋಗಳು ವೈರಲ್ ಆದ ಬಳಿಕ ಹೆಚ್ಎಎಲ್ (HAL) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ವಿರುದ್ಧವೂ ತನಿಖೆ ಮುಂದುವರಿದಿದೆ.

ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಮಕ್ಕಳು ಅಳುವಾಗ ಮತ್ತು ಗಲಾಟೆ ಮಾಡಿದಾಗ ಡೇ ಕೇರ್ ಸಿಬ್ಬಂದಿ ಹಲ್ಲೆ, ಬೆದರಿಕೆ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ವಿಡಿಯೋ ಸಮೇತ ಮಕ್ಕಳ ಸಹಾಯವಾಣಿಗೆ ದೂರು ಬಂದಿದ್ದು, ಬಳಿಕ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ವಿಡಿಯೋದಲ್ಲಿ ಕಂಡುಬಂದ ಬೆಚ್ಚಿಬೀಳಿಸುವ ದೃಶ್ಯಗಳು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಎರಡು ರಿಂದ ಮೂರು ವರ್ಷದೊಳಗಿನ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿರುವುದು ವಿಡಿಯೋಗಳಲ್ಲಿ ಕಂಡುಬಂದಿದೆ.
• ಮಕ್ಕಳು ಅಳುತ್ತಿದ್ದರೆ ಬೆದರಿಕೆ ಹಾಕುವುದು
• ಮಕ್ಕಳನ್ನು ವಾಷಿಂಗ್ ಮೆಷಿನ್ ಒಳಗೆ ಇರಿಸುವುದು
• ಪಾಶ್ಚಾತ್ಯ ಶೈಲಿಯ ಶೌಚಾಲಯದ ಮೇಲೆ ಬಲವಂತವಾಗಿ ಕೂರಿಸುವುದು
• ಟಾಯ್ಲೆಟ್ ಜೆಟ್ ಸ್ಪ್ರೇ ಮೂಲಕ ಬಾಯಿಗೆ ನೀರು ಸಿಂಪಡಿಸುವುದು
• ಮಕ್ಕಳನ್ನು ಬಾತ್ರೂಮ್ನಲ್ಲಿ ಲಾಕ್ ಮಾಡಿ ಮೌನವಾಗಿರಲು ಬೆದರಿಸುವುದು
ಇಂತಹ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿದ್ದು, ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಟಿ ಕಂಪನಿ ಕ್ಯಾಂಪಸ್ನಲ್ಲಿದ್ದ ಡೇ ಕೇರ್
ಈ ಡೇ ಕೇರ್ ಕೇಂದ್ರವು ಬೆಂಗಳೂರಿನ ಕೇಪ್ಜೆಮಿನಿ (Capgemini) ಹೆಚ್ಎಎಲ್ ಕ್ಯಾಂಪಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಐಟಿ ಉದ್ಯೋಗಿಗಳು ತಮ್ಮ ಪುಟ್ಟ ಮಕ್ಕಳನ್ನು ಕೆಲಸದ ವೇಳೆಯಲ್ಲಿ ಇಲ್ಲಿ ಬಿಡುತ್ತಿದ್ದರು ಎನ್ನಲಾಗಿದೆ.ಮಕ್ಕಳ ಮೇಲಿನ ದೌರ್ಜನ್ಯವನ್ನು ತೋರಿಸುವ ವಿಡಿಯೋಗಳು ವಾಟ್ಸಾಪ್ನಲ್ಲಿ ಹರಿದಾಡಿದ ಬಳಿಕ ಮಕ್ಕಳ ಸಹಾಯವಾಣಿಗೆ ದೂರು ಸಲ್ಲಿಕೆಯಾಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

ಬಿಎನ್ಎಸ್ ಮತ್ತು ಬಾಲ ನ್ಯಾಯ ಕಾಯ್ದೆಯಡಿ ಪ್ರಕರಣ
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರು ಸಿಬ್ಬಂದಿಯನ್ನು ಬಂಧಿಸಿರುವ ಹೆಚ್ಎಎಲ್ ಪೊಲೀಸರು, ಉಳಿದ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಬೆಂಗಳೂರಿನಲ್ಲಿ ಮಕ್ಕಳ ಸುರಕ್ಷತೆ ಹಾಗೂ ಖಾಸಗಿ ಡೇ ಕೇರ್ ಕೇಂದ್ರಗಳ ಕಾರ್ಯವೈಖರಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular