ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಜಯ್, ಭೂಷಣ್, ಮಿಥುನ್ ಸೇರಿ ಐವರನ್ನ ಸಖರಾಯಪಟ್ಟಣ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (38) ಎಂಬುವವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
ದತ್ತಜಯಂತಿ ಬ್ಯಾನರ್ ತೆರವು ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ನಂತರ ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
