HomeLatest NewsBREAKING : ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್ : ಐವರು ಪೊಲೀಸ್ ವಶಕ್ಕೆ.!

BREAKING : ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್ : ಐವರು ಪೊಲೀಸ್ ವಶಕ್ಕೆ.!


ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಜಯ್, ಭೂಷಣ್, ಮಿಥುನ್ ಸೇರಿ ಐವರನ್ನ ಸಖರಾಯಪಟ್ಟಣ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (38) ಎಂಬುವವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು
ದತ್ತಜಯಂತಿ ಬ್ಯಾನರ್ ತೆರವು ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದು ನಂತರ ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular