BIG NEWS : ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ : ನಾಲ್ವರ ವಿರುದ್ಧ FIR, ಬಂಧನ

ಕೋಲಾರ : ಕೋಲಾರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ.

ಕೋಲಾರದ ಮಾಲೂರಿನ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣದಲ್ಲಿ ನಾಲ್ವರ ವಿರುದ್ಧ FIR ದಾಖಲಿಸಲಾಗಿದ್ದು ಅವರನ್ನು ಬಂಧಿಸಲಾಗಿದೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ.ಈ ಪ್ರಕರಣವು ಸಮಾಜ ಕಲ್ಯಾಣ ಇಲಾಖೆಯ ಆದಿಯಾಗಿ, ಉಳಿದ ಇಲಾಖೆಗಳು ಶೈಕ್ಷಣಿಕ ಸಂಸ್ಥೆಗಳ ಹಾಸ್ಟೆಲ್ ಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಎಚ್ಚರಿಕೆಯಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.

ಇಂತಹ ಯಾವುದೇ ಅಸಂವಿಧಾನಿಕ ಮತ್ತು ಅಮಾನವೀಯ ವಿಷಯಗಳು ಕಂಡು ಬಂದರೆ ಇಲಾಖೆಯ ಸಹಾಯವಾಣಿ ಸಂಖ್ಯೆ – 08022634300 ಗೆ ಕರೆಮಾಡಿ ದೂರು ದಾಖಲಿಸಲು ಕೋರಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read