HomeKarnatakaಐವರು ಬಾಣಂತಿಯರ ಸಾವು ಕೇಸ್ : ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷಿ...

ಐವರು ಬಾಣಂತಿಯರ ಸಾವು ಕೇಸ್ : ಬಳ್ಳಾರಿ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷಿ ಚೌಧರಿ ಭೇಟಿ, ಪರಿಶೀಲನೆ

ಬಳ್ಳಾರಿ : ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಐವರು ಬಾಣಂತಿಯರ ಸಾವು ಪ್ರಕರಣ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಈ ತರಹದ ಘಟನೆ ಸಂಭವಿಸಲಿರಲಿಲ್ಲ, ಬಾಣಂತಿಯರ ಸಾವಿಗೆ ಐವಿ ರಿಂಗರ್ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆಗ ಸರಬರಾಜು ಆದ ಎಲ್ಲಾ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬ್ಯಾಚ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಐವಿ ದ್ರಾವಣ ಔಷಧ ಸರಬರಾಜು ಸ್ಥಗಿತಗೊಳಿಸಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರವು ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಜನಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗುಣಮಟ್ಟದ ಔಷಧಿ ಸರಬರಾಜು ಮಾಡಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಸ್ತ್ರಚಿಕಿತ್ಸಾ ಕೇಂದ್ರಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಶುಶೂಶ್ರಕರು ಹಾಗೂ ಇತರರು ಹಾಜರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular