ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ ಕಿಡಿಗೇಡಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣವರ್ ಅವರ ಖಾತೆಯಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಬಗ್ಗೆ ಖಾತೆಯೊಂದರಿಂದ ಅಗೌರವಯುತವಾದ ಕಾಮೆಂಟ್ ಬಂದಿತ್ತು.
ಇದನ್ನು ಗಮನಿಸಿದ ನಾಗಲಕ್ಷ್ಮಿ ಚೌಧರಿ ಅವರ ಸಂಬಂಧಿ ಜಗದೀಶ್ ಅವರು ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಇನ್ಸ್ಟಾಗ್ರಾಂ ಖಾತೆಯ ಮಾಹಿತಿ ಪಡೆಯಲು ಸೈಬರ್ ತಜ್ಞರ ನೆರವು ಕೋರಿದ್ದಾರೆ.