ಬೆಂಗಳೂರು: ಮಹಿಳೆಯನ್ನು ನಂಬಿಸಿ ಅಕ್ರಮವಾಗಿ 21 ಗುಂಟೆ ಜಮೀನು ಬರೆಸಿಕೊಂಡ ಆರೋಪ ಕೇಳಿ ಬಂದಿದ್ದು, ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಕೇಸ್ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗಿರಿಜೇಶ್ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ನೆಲಮಂಗಲ ತಾಲೂಕಿನ ಸೋಂಪುರದಲ್ಲಿರುವ ನಿಮ್ಮ ಜಮೀನನ್ನು ಕೆಐಎಡಿಬಿ ಸ್ವಾಧೀನ ಮಾಡಿಕೊಳ್ಳುತ್ತದೆ. ಪರಿಹಾರ ಕೊಡಿಸುತ್ತೇನೆ ಎಂದು ನಂಬಿಸಿ ಮಹಿಳೆಯಿಂದ 21 ಗುಂಟೆ ಜಮೀನು ಬರೆಸಿಕೊಂಡಿದ್ದ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

