HomeLatest Newsರಸ್ತೆಯಲ್ಲಿ ಹೋಗುತ್ತಿದ್ದ ಕಾನೂನು ವಿದ್ಯಾರ್ಥಿ ತಡೆದು ಜಾತಿ ನಿಂದನೆ: ಇಬ್ಬರ ವಿರುದ್ಧ ಕೇಸ್ ದಾಖಲು

ರಸ್ತೆಯಲ್ಲಿ ಹೋಗುತ್ತಿದ್ದ ಕಾನೂನು ವಿದ್ಯಾರ್ಥಿ ತಡೆದು ಜಾತಿ ನಿಂದನೆ: ಇಬ್ಬರ ವಿರುದ್ಧ ಕೇಸ್ ದಾಖಲು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ನಾಗರಾಳ ಗ್ರಾಮದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾನೂನು ವಿದ್ಯಾರ್ಥಿಯನ್ನು ಬಲವಂತವಾಗಿ ತಡೆದು ಜಾತಿ ನಿಂದನೆ ಮಾಡಿ,  ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನೂನು ಪದವೀಧರರಾಗಿರುವ ದುರ್ಗಪ್ಪ ಹೊಸಮನಿ ನಾಗರಾಳ ಗ್ರಾಮದಲ್ಲಿ ನಡೆದುಕೊಂಡು ಹೋಗುವಾಗ ಯಾವುದೇ ಕಾರಣಇಲ್ಲದೆ ಅವರನ್ನು ತಡೆದ ಮಲ್ಲಯ್ಯ ಮತ್ತು ಅರ್ಜುನ ಎನ್ನುವವರು ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಜಾತಿ ನಿಂದನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular