HomeKarnatakaವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್ನಿಸಿದ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಕೌಶಿಕ್ ಕರಣ್(22) ವಿರುದ್ಧ ಐಪಿಸಿ ಸೆಕ್ಷನ್ 336 ಅಡಿ  ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುರ್ತು ನಿರ್ಗಮನ ಬಾಗಿಲ ಬಳಿ ಕುಳಿತಿದ್ದ ಕೌಶಿಕ್ ವಿಮಾನ ನಿಲ್ಲುವ ಮೊದಲೇ ಬಾಗಿಲು ತೆಗೆಯಲು ಯತ್ನಿಸುತ್ತಿರುವುದನ್ನು ಗಮನಿಸಿದ ಕ್ಯಾಬಿನ್ ಸಿಬ್ಬಂದಿ ಆತನನ್ನು ಭದ್ರತಾ ಸಿಬ್ಬಂದಿಯ ವಶಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಲು ಕೊಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸಿದ್ದ ಕೌಶಿಕ್ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕಾರಣ ಗೊತ್ತಿಲ್ಲದೆ ಈ ಘಟನೆ ನಡೆದಿದೆ ಎಂದು ವಿಚಾರಣೆ ವೇಳೆ ಗೊತ್ತಾಗಿದೆ. ಉದ್ದೇಶಪೂರ್ವಕವಾಗಿ ಆತ ಈ ಕೃತ್ಯ ಎಸಗಿಲ್ಲ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular