HomeLatest Newsಸುಳ್ಳು ಮಾಹಿತಿ ವಿಡಿಯೋ ಪ್ರಸಾರ: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲು

ಸುಳ್ಳು ಮಾಹಿತಿ ವಿಡಿಯೋ ಪ್ರಸಾರ: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಿದ ಕಾಲ್ಪನಿಕ, ಸುಳ್ಳು ಮಾಹಿತಿ ಒಳಗೊಂಡ ವಿಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತಮ್ಮ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿದ ಮಾಹಿತಿಗಳನ್ನು ಹೊರತಾಗಿ ಇತರೆ ಮಾಹಿತಿ ಒಳಗೊಂಡ ಕಾಲ್ಪನಿಕವಾಗಿ ಸೃಷ್ಟಿಸಿದ ಸುಳ್ಳು ಮಾಹಿತಿ ವಿಡಿಯೋವನ್ನು ಯೂಟ್ಯೂಬರ್ ಎಂ.ಡಿ. ಸಮೀರ್ ಪ್ರಸಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular