HomeKarnatakaBREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಾಗಿದೆ.

ಬಾಂಗ್ಲಾದೇಶದಲ್ಲಿ ಚಿನ್ಮಯಿ ಕೃಷ್ಣದಾಸ್ ಬಂಧನ ಖಂಡಿಸಿ ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಈಶ್ವರಪ್ಪ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಮಥುರಾ ಪ್ಯಾರಡೈಸ್ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಈಶ್ವರಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಅನ್ಯ ಧರ್ಮದ ವಿರುದ್ಧ, ಕೋಮು ಭಾವನೆ ಕೆರಳಿಸುವ ಹಾಗೂ ದ್ವೇಷ ಭಾವನೆ ಮೂಡಿಸುವ ಭಾಷಣ ಮಾಡಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

20 ದಿನಗಳ ಹಿಂದೆ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular