HomeLatest Newsಡಿಸಿ ದಿಢೀರ್ ಪರಿಶೀಲನೆ ವೇಳೆ ನಗದು ವ್ಯತ್ಯಾಸ, ಅನಧಿಕೃತ ವ್ಯಕ್ತಿಯಿಂದ ಕಚೇರಿ ಕೆಲಸ: SDA ಅಮಾನತು

ಡಿಸಿ ದಿಢೀರ್ ಪರಿಶೀಲನೆ ವೇಳೆ ನಗದು ವ್ಯತ್ಯಾಸ, ಅನಧಿಕೃತ ವ್ಯಕ್ತಿಯಿಂದ ಕಚೇರಿ ಕೆಲಸ: SDA ಅಮಾನತು

  ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವಲಯ ಕಚೇರಿ-2ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಹೆಚ್. ಇವರನ್ನು ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು ಅನಧಿಕೃತ ವ್ಯಕ್ತಿಯನ್ನು ಸಹಕಾರಕ್ಕಾಗಿ ನೇಮಿಸಿಕೊಂಡಿರುವ ಆರೋಪದ ಮೇಲೆ ಕರ್ತವ್ಯ ಲೋಪವೆಂದು ಪರಿಗಣಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅಮಾನತು ಮಾಡಿ ಆದೇಶಿಸಿದ್ದಾರೆ.

  ರೂಪಾ ಹೆಚ್. ಅವರು ವಲಯ ಕಛೇರಿ-2. ಮಹಾನಗರಪಾಲಿಕೆ ದಾವಣಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಪಾಲಿಕೆಯಲ್ಲಿ “ಎ” ಖಾತಾ ಮತ್ತು “ಬಿ ಖಾತಾ ಆಂದೋಲನದ ಪ್ರಗತಿ ಕುರಿತು ಜೂನ್ 6 ರಂದು ಜಿಲ್ಲಾಧಿಕಾರಿ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಮಯದಲ್ಲಿ ವಲಯ ಕಛೇರಿ-2 ರಲ್ಲಿ ನಿರ್ವಹಿಸಲಾಗುತ್ತಿರುವ ನಗದು ವಹಿಯಲ್ಲಿ ನೌಕರಳು ತನ್ನ ಬಳಿ 500 ರೂ. ಇರುವುದೆಂದು ಘೋಷಿಸಿಕೊಂಡಿರುತ್ತಾರೆ. ಆದರೆ ನೌಕರರನ್ನು ತಪಾಸಣೆ ನಡೆಸಿದ ಸಮಯದಲ್ಲಿ ಇವರ ಬಳಿ ರೂ 3600 ರೂ. ಹಣವಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘೋಷಣೆಗಿಂತ ಹೆಚ್ಚಾಗಿರುವ ಹಣದ ಕುರಿತು ವಿವರಣೆ ನೀಡುವಲ್ಲಿ ಹಾಗೂ ತಪಾಸಣೆ ನಡೆಸಲು ಅಸಹಕಾರ ತೋರಿದ್ದರಿಂದ ನೌಕರಳ ಬಳಿ ಲಭ್ಯವಿರುವ ಹಣವು ಲಂಚದ ಹಣವಾಗಿರಬಹುದೆಂದು ಪರಿಗಣಿಸಿ ಹಾಗೂ ತಾನು ನಿರ್ವಹಿಸುತ್ತಿರುವ ಶಾಖೆಯಲ್ಲಿ ಅನಧಿಕೃತ ವ್ಯಕ್ತಿಯಿಂದ ತನ್ನ ಕರ್ತವ್ಯವನ್ನು ನಡೆಸುತ್ತಿದ್ದು ಕಂಡು ಬಂದಿದ್ದು, ಇದು ಸಹ ಕೆ.ಸಿ.ಎಸ್.ಆರ್ ಮತ್ತು ನಡೆತ ನಿಯಮಗಳ ವಿರುದ್ಧವಾದ ಕ್ರಮವಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular