HomeKarnatakaಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ,...

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ, ಕಚೇರಿಯಲ್ಲಿ 7.62 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ. ನಗದು ಪತ್ತೆಯಾಗಿದ್ದು, ಅದನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಸಕರ ಪುತ್ರನ ಸಂಪತ್ತಿನ ಖಜಾನೆ ಬಗೆದಷ್ಟು ಆಳದಲ್ಲಿದೆ. ಬರೋಬ್ಬರಿ 7.62 ಕೋಟಿ ರೂ. ನಗದು ಪತ್ತೆಯಾಗಿದೆ. ಕೈ ಇಟ್ಟಲ್ಲೆಲ್ಲ ಕಂತೆ ಕಂತೆ ಹಣ ಕಂಡು ಅಧಿಕಾರಿಗಳೇ ದಂಗುಬಡಿದಿದ್ದಾರೆ. ಸಂಜಯನಗರದ ಮನೆ ಮತ್ತು ಕ್ರೆಸೆಂಟ್ ರಸ್ತೆಯ ಕಚೇರಿಯಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. ಕಚೇರಿಯಲ್ಲಿ 1.62 ಹಾಗೂ ಮನೆಯಲ್ಲಿ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಬೆಳಗಿನ ಜಾವ 4 ಗಂಟೆಯವರೆಗೂ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular