ಬೆಂಗಳೂರು : ರಾಜ್ಯ ಸರ್ಕಾರದ ನಿವೃತ್ತ ನೌಕರರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಈ ವರ್ಷ ಈಗಾಗಲೇ, ಸೇವೆಯಲ್ಲಿರುವ ಅಧಿಕಾರಿಗಳಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಕಾರ್ಯಗತಗೊಳಿಸಲು ಸೂಚಿಸಿದ್ದು, ಈ ಯೋಜನೆಯನ್ನು ನಿರ್ವಹಿಸಲು ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ನೌಕರರ ಅವಲಂಬಿತ ಕುಟುಂಬ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಈ ಪ್ರಕ್ರಿಯೆ ಮುಕ್ತಾಯವಾದ ನಂತರ ತಮ್ಮ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು ಎಂದು ಆರ್ಥಿಕ ಇಲಾಖೆಯು ಹಿಂಬರಹವನ್ನು ನೀಡಿರುತ್ತದೆ. ಸದರಿ ಮಾಹಿತಿಯನ್ನು ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಿದೆ.

