ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ.
ಹೌದು, ಜಾನಪದ ಕಲಾವಿದ ಜೋಗಿಲ ಸಿದ್ದರಾಜು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಎಸ್ ಜೆ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಜಾನಪದ ಕಲಾವಿದ ಜೋಗಿಲ ಸಿದ್ದರಾಜು ಅವರ ವಿರುದ್ಧ ಜಾತಿ ನಿಂದನೆ, ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಎಫ್ ಐ ಆರ್ ದಾಖಲಾಗಿದೆ.
ಪ್ರಾಯೋಜಕತ್ವ ಸಹಾಯಧನದ ಬಗ್ಗೆ ವಿಚಾರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಜೋಗಿಲ ಸಿದ್ದರಾಜು ಹೋಗಿದ್ದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯಿತ್ರಿ ಹಾಗೂ ಜೋಗಿಲ ಸಿದ್ದರಾಜು ಅವರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಾಯತ್ರಿ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಜೋಗಿಲ ಸಿದ್ದರಾಜು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಎಸ್ ಜೆ ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
You Might Also Like
TAGGED:ಜಾತಿ ನಿಂದನೆ ಆರೋಪ