HomeLatest NewsBREAKING : 'ಜಾತಿ ನಿಂದನೆ'ಗೆ ಹೆದರಿ ಆತ್ಮಹತ್ಯೆಗೆ ಶರಣಾದ ಯುವಕ : ವಿಷಯ ತಿಳಿದು ಹೃದಯಾಘಾತದಿಂದ...

BREAKING : ‘ಜಾತಿ ನಿಂದನೆ’ಗೆ ಹೆದರಿ ಆತ್ಮಹತ್ಯೆಗೆ ಶರಣಾದ ಯುವಕ : ವಿಷಯ ತಿಳಿದು ಹೃದಯಾಘಾತದಿಂದ ತಂದೆಯೂ ಸಾವು.!

ಯಾದಗಿರಿ: ಜಾತಿ ನಿಂದನೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ವಿಷಯ ತಿಳಿದು ಆಘಾತಕ್ಕೊಳಗಾದ ಆತನ ತಂದೆ ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಜಮೀನಿನ ದಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳವಾಗಿ ಹಿರಿಯರು ನ್ಯಾಯಪಂಚಾಯಿತಿ ಮಾಡಿ ಬಗೆಹರಿಸಿದ್ದರು. ಆದರೆ ಯುವಕನ ವಿರುದ್ಧ ಕೆಲವರು ಜಾತಿ ನಿಂದನೆ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸಿದ್ದರು. ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತೆ ಎಂದು ಭಯಗೊಂಡು ಯುವಕ ಮೆಹಬೂಬ್ (22) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಕೇಳಿ ಆಘಾತಗೊಂಡ ಆತನ ತಂದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಒಂದೇ ಮನೆಯಲ್ಲಿ ಒಂದೇ ದಿನ ಎರಡು ಸಾವಾಗಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular