ಲೋಕಸಭೆ ಚುನಾವಣೆ ನಂತರ ಜಾತಿ ಗಣತಿ ವರದಿ ಬಹಿರಂಗ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಗಣತಿ ವರದಿ ಅಂಶಗಳನ್ನು ಲೋಕಸಭೆ ಚುನಾವಣೆ ಬಳಿಕ ಬಹಿರಂಗಗೊಳಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆ ಬಳಿಕ ಜಾತಿಗಣತಿ ಅಂಶ ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದೆ. ವರದಿಯಲ್ಲಿನ ಅಂಕಿ, ಅಂಶಗಳು, ಮಾಹಿತಿಯನ್ನು ಸಾರ್ವಜನಿಕ ಗೊಳಿಸಿಲ್ಲ. ಹಾಗಾಗಿ ಈಗಲೇ ವರದಿ ವಿರೋಧಿಸುವುದರಲ್ಲಿ ಅರ್ಥವಿಲ್ಲ. ವರದಿಯಲ್ಲಿನ ಮಾಹಿತಿ ಬಹಿರಂಗವಾದ ನಂತರ ಚರ್ಚೆ ಮಾಡಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read