HomeKarnatakaBREAKING NEWS: ಜಾತಿಗಣತಿ ವರದಿ ಸ್ವೀಕಾರಕ್ಕೆ ಬದ್ಧ; ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ವರದಿ ಸಲ್ಲಿಕೆ;...

BREAKING NEWS: ಜಾತಿಗಣತಿ ವರದಿ ಸ್ವೀಕಾರಕ್ಕೆ ಬದ್ಧ; ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ವರದಿ ಸಲ್ಲಿಕೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಬಿ.ಎಸ್.ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ನಾವು ಜಾತಿಗಣತಿ ವರದಿ ಸ್ವೀಕರಿಸುತ್ತೇವೆ ಎಂದು ಹೇಳಿದರು.

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular