ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ಈವರೆಗೆ ಮೂವರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದ ಮೂವರು ಸಿಬ್ಬಂದಿಗಳು ಸರ್ವೆ ವೇಳೆ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.
ನಾಗಮೋಹನ್ ದಾಸ್ ಆಯೋಗ ಮೃತರ ಕುಟುಂಬಕ್ಕೆ ತಲಾ 15 ಲಕ್ಷ ಪರಿಹಾರ ಘೋಷಿಸಿತ್ತು. ಆದರೆ ನಮ್ಮ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.