HomeLatest NewsBREAKING: ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ತೀರ್ಮಾನ: ಕೇವಲ 15 ದಿನಗಳಲ್ಲಿ ಸಮೀಕ್ಷೆ: ಸಿಎಂ...

BREAKING: ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ತೀರ್ಮಾನ: ಕೇವಲ 15 ದಿನಗಳಲ್ಲಿ ಸಮೀಕ್ಷೆ: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರ‍ಿತ್ವದಲ್ಲಿ ನಡೆದ ಸಭೆಯಲ್ಲಿ ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು.

ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 7ರವರೆಗೆ ಜಾತಿಗಣತಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೇವಲ 15 ದಿನಗಳಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ಅಕ್ಟೋಬರ್ ತಿಂಗಳ ಒಳಗಾಗಿ ಸಮೀಕ್ಷೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್:

  • ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
  • ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
  • ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ.
  • ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.
  • ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
  • ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ.
  • ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.
  • ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular