HomeLatest NewsBREAKING : ಬೆಂಗಳೂರಲ್ಲಿ ಅ.3 ರಿಂದ 'ಜಾತಿ ಗಣತಿ' ಸಮೀಕ್ಷೆ ಆರಂಭ.! :  GBA ಮುಖ್ಯ...

BREAKING : ಬೆಂಗಳೂರಲ್ಲಿ ಅ.3 ರಿಂದ ‘ಜಾತಿ ಗಣತಿ’ ಸಮೀಕ್ಷೆ ಆರಂಭ.! :  GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ಬೆಂಗಳೂರಿನಲ್ಲಿ ಅ.3 ರಿಂದ ಜಾತಿ ಗಣತಿ ಸಮೀಕ್ಷೆ ಆರಂಭವಾಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಸದ್ಯ ಸಮೀಕ್ಷಾದಾರರಿಗೆ ತರಬೇತಿ ನೀಡಲಾಗುತ್ತಿದ್ದು, ಮುಂದಿನ ತಿಂಗಳು ಅಕ್ಟೋಬರ್ 3 ರಿಂದ ಸಮೀಕ್ಷೆ ಆರಂಭವಾಗಲಿದೆ ಎಂದಿದ್ದಾರೆ. ಈಗಾಗಲೇ ಬೆಂಗಳೂರು ಬಿಟ್ಟು ರಾಜ್ಯದ ಎಲ್ಲಾ ಕಡೆ ಸಮೀಕ್ಷೆ ಆರಂಭವಾಗಿದ್ದು, ಅ.7 ರಂದು ಮುಕ್ತಾಯವಾಗಲಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ 22-09-2025 ರಿಂದ ಪ್ರಾರಂಭಿಸಿದ್ದು, ಪ್ರಗತಿಯಲ್ಲಿದೆ.ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಸೆಪ್ಟೆಂಬರ್ 22, 2025 ರಿಂದ ಪ್ರಾರಂಭವಾಗಿದೆ ಮತ್ತು ಅದು ಪ್ರಗತಿಯಲ್ಲಿದೆ. ಸಮೀಕ್ಷೆಯು ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಒಳಗೊಳ್ಳಲು ಉದ್ದೇಶಿಸಿದ್ದರೂ, ನಾಗರಿಕರು/ಮನೆಯವರು ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಮತ್ತು ಮಾಹಿತಿಯನ್ನು ಬಹಿರಂಗಪಡಿಸಲು ಅವರ ಕಡೆಯಿಂದ ಯಾವುದೇ ಬಲವಂತವಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular