HomeLatest NewsBREAKING: ಜಾತಿಗಣತಿಗೆ ಗೈರಾಗಿದ್ದ ಮೂವರು ಸಿಬ್ಬಂದಿ ಸಸ್ಪೆಂಡ್

BREAKING: ಜಾತಿಗಣತಿಗೆ ಗೈರಾಗಿದ್ದ ಮೂವರು ಸಿಬ್ಬಂದಿ ಸಸ್ಪೆಂಡ್

ದಾವಣಗೆರೆ: ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮಿಕ್ಷೆ- ಜಾತಿಗಣತಿ ನಡೆಯುತ್ತಿದ್ದು, ಗಣತಿಗೆ ಗೈರಾಗಿದ್ದ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಇಬ್ಬರು ಶಿಕ್ಷಕರು, ಓರ್ವ ಹಾಸ್ಟೆಲ್ ವಾರ್ಡನ್ ಸೇರಿ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಾತಿಗಣತಿ ಸರ್ವೆಗೆ ಗೈರಾಗಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಜಾಮಾಪುರ ಪ್ರಾಥಮಿಕ ಶಾಲೆ ಶಿಕ್ಷಕ ಡಿ.ಕೆ.ಮಂಜುನಾಥ್. ನಾಗನೂರಿನ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಹೆಚ್.ಬಸವರಾಜಪ್ಪ ಹಾಗೂ ಓರ್ವ ಹಾಸ್ಟೆಲ್ ವಾರ್ಡನ್ ಸಸ್ಪೆಂಡ್ ಆದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular