HomeLatest News‘ಪ್ರೀತಿ’ಗೆ ಅಡ್ಡಿಯಾದ ಜಾತಿ: ದುಡುಕಿದ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆ

‘ಪ್ರೀತಿ’ಗೆ ಅಡ್ಡಿಯಾದ ಜಾತಿ: ದುಡುಕಿದ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆ

ಕೊಪ್ಪಳ: ಜಾತಿ ಬೇರೆಯಾಗಿದ್ದ ಕಾರಣಕ್ಕೆ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಸಮೀಪ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜಿಗಿದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಹೊಸ ಲಿಂಗಾಪುರ ಗ್ರಾಮದ ಪ್ರವೀಣ್(18) ಸಾಣಾಪುರದ ಅಂಜಲಿ(18) ಮೃತಪಟ್ಟವರು.

ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದು, ಜಾತಿ ಬೇರೆಯಾಗಿದ್ದ ಕಾರಣ ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಬೇಸತ್ತ ಇಬ್ಬರೂ ಎರಡು ದಿನದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular